ಸೋಮವಾರಪೇಟೆಯಲ್ಲಿ ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ

ಹೊಸದಿಗಂತ ವರದಿ ಸೋಮವಾರಪೇಟೆ:

ಲೋಕಸಭಾ ಚನಾವಣೆಯ ಹಿನ್ನಲೆಯಲ್ಲಿ ಮತದಾರರ ಜಾಗೃತಿಗಾಗಿ ಇಲ್ಲಿನ ಖಾಸಗಿ ಮತ್ತು ಕೆ.ಎಸ್.ಆರ್.ಸಿ. ಬಸ್ ನಿಲ್ದಾಣ ಹಾಗೂ ಪಟ್ಟಣ ಪಂಚಾಯಿತಿ ಆವರಣದಲ್ಲಿ ನಡೆಯಿತು.

ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕದಲ್ಲಿ ಏಪ್ರಿಲ್ 26ಹಾಗೂ ಮೇ 7ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ನಡೆಸಲಾಯಿತು.

ಇಲ್ಲಿನ ಪಟ್ಟಣ ಪಂಚಾಯ್ತಿ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ದೆಯಲ್ಲಿ ಸಾಕಷ್ಟು ಮಹಿಳೆಯರು ಆಸಕ್ತಿಯಿಂದ ಭಾಗವಹಿಸಿ ಚುನಾವಣೆ ಸಂಬಂಧಿಸಿದ ರಂಗೋಲಿ ಹಾಗೂ ಘೋಷವಾಕ್ಯಗಳನ್ನು ಬರೆದರು.

ಈ ಸಂದರ್ಭ ಪಟ್ಟಣ ಪಂಚಾಯ್ತಿ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನವೀನ್ ಕುಮಾರ್, ಮುಖ್ಯಾಧಿಕಾರಿ ಲೋಕಯ್ಯ ನಾಯ್ಕ, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ಸಿಬ್ಬಂದಿಗಳಾದ ರೂಪಾ ವನಿತಾ, ಹೊನಲಾದೇವಿ, ಆದಿಲ್ ಪಾಷ ಮುಂತಾದವರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!