Sunday, December 10, 2023

Latest Posts

ರಾಣಿ ಚನ್ನಮ್ಮ ಮೈದಾನದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರದ ರಾಣಿ ಚನ್ನಮ್ಮ ಮೈದಾನದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ಶಾಸಕ ಬಸವಗೌಡ ಪಾಟೀಲ ಯತ್ನಾಳ ಹಾಗೂ ಅರವಿಂದ ಬೆಲ್ಲದ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ವಿಸರ್ಜನಾ ಮೆರವಣಿಗೆ ಚಾಲನೆ ನೀಡಿದರು.

ಇದಕ್ಕೂ ಮೊದಲು ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಉತ್ಸವ ಮಹಾಮಂಡಳಿ ಕಾರ್ಯಕರ್ತರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಂಚವಾದ್ಯ, ಡೋಲು, ಜಾಂಝ್, ಡಿಜೆ ಮೇಳಗಳು ಮೆರವಣಿಗೆ ಮೆರಗು ನೀಡಿವೆ. ಗಣೇಶ ಮಹಾರಾಜ, ಜೈ ಶ್ರೀರಾಮ, ಜೈ ಜೈ ಶ್ರೀರಾಮ, ಹನುಮಾನ ಮಹಾರಾಜಕೀ ಜೈ ಎಂಬ ಘೋಷಣೆ ಮೂಗಿಲು ಮುಟ್ಟಿದವು. ಕಿತ್ತೂರ ರಾಣಿ ಚನ್ನಮ್ಮ ವೃತ್ತ, ರಾಣಿ ಚನ್ನಮ್ಮ ಮೈದಾನ ಭಗವಧ್ವಜ, ಕೇಸರಿ ಬಾವುಟಗಳು ಮಯವಾಗಿತ್ತು.

ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ಬಿಜೆಪಿ, ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಹೆಚ್‌ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ. ನಗರದ ಪ್ರದೇಶ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ವಿವಿಧ ಜಿಲ್ಲೆಯ ನೂರಾರ ಜನರು ಭಾಗವಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!