February 9, 2026
Monday, February 9, 2026
spot_img

ರಣಜಿ ಕ್ವಾರ್ಟರ್ ಫೈನಲ್ | ಕೆಎಲ್ ರಾಹುಲ್ ಶತಕ: ಗೆಲುವಿನತ್ತ ದಾಪುಗಾಲು ಹಾಕಿದ ಕರ್ನಾಟಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಗೆಲುವಿನತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವನ್ನು ಕರ್ನಾಟಕ ಬೌಲರ್‌ಗಳು ಮೊದಲ ಇನಿಂಗ್ಸ್‌ನಲ್ಲಿ ಕೇವಲ 120 ರನ್‌ಗೆ ಸೀಮಿತಗೊಳಿಸಿದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ 173 ರನ್ ಗಳಿಸಿ 53 ರನ್ ಮುನ್ನಡೆ ಪಡೆದಿತು.

ಎರಡನೇ ಇನಿಂಗ್ಸ್‌ನಲ್ಲಿ ಮುಂಬೈ 377 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿ 325 ರನ್ ಗುರಿ ನೀಡಿತು. ಆಕಾಶ್ ಆನಂದ್ 70 ರನ್ ಮತ್ತು ತನುಷ್ ಕೋಟ್ಯಾನ್ ಅಜೇಯ 48 ರನ್ ಗಳಿಸಿ ತಂಡಕ್ಕೆ ನೆರವಾದರು.

ಇದನ್ನೂ ಓದಿ:

ಗುರಿ ಬೆನ್ನಟ್ಟಿದ ಕರ್ನಾಟಕ ಆರಂಭದಲ್ಲೇ ಮಯಾಂಕ್ ಅಗರ್ವಾಲ್ ವಿಕೆಟ್ ಕಳೆದುಕೊಂಡರೂ, ಕೆಎಲ್ ರಾಹುಲ್ ಜವಾಬ್ದಾರಿಯುತ ಆಟವಾಡಿ 147 ಎಸೆತಗಳಲ್ಲಿ 13 ಬೌಂಡರಿಗಳೊಂದಿಗೆ ಶತಕ ಬಾರಿಸಿದರು. ದೇವದತ್ತ್ ಪಡಿಕ್ಕಲ್ 39 ರನ್ ಕೊಡುಗೆ ನೀಡಿದರು.

47 ಓವರ್‌ಗಳ ಅಂತ್ಯಕ್ಕೆ ಕರ್ನಾಟಕ 3 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿದ್ದು, ಇನ್ನೂ 116 ರನ್ ಗಳಿಸಿದರೆ ಸೆಮಿಫೈನಲ್ ಪ್ರವೇಶಿಸಲಿದೆ. ರಾಹುಲ್ ಮತ್ತು ಸ್ಮರಣ್ ರವಿಚಂದ್ರನ್ ಕ್ರೀಸ್‌ನಲ್ಲಿ ಸ್ಥಿರವಾಗಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !