ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದಲ್ಲಿ ರಣವೀರ್ ಅಲ್ಲಾಹಬಾದಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಎಲ್ಲರ ಅಕ್ರೋಶಕ್ಕೆ ಕಾರಣವಾಗಿದ್ದು, ಹೀಗಾಗಿ ಅಶ್ಲೀಲತೆಯನ್ನು ಪ್ರಸಾರ ಮಾಡಿದ್ದಕ್ಕಾಗಿ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದ ಯೂಟ್ಯೂಬ್ ಸಂಚಿಕೆಯನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
‘ರಣವೀರ್ ಅಲ್ಲಾಹಬಾದಿಯಾ ಅವರ ಅಶ್ಲೀಲ ಮತ್ತು ವಿಕೃತ ಕಾಮೆಂಟ್‌ಗಳನ್ನು ಹೊಂದಿರುವ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ YouTube ಸಂಚಿಕೆಯನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಿರ್ಬಂಧಿಸಲಾಗಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಅವರು ಪೋಸ್ಟ್‌ನಲ್ಲಿ ಮಾಡಿದ್ದಾರೆ.
ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್ ರಿಯಾಲಿಟಿ ಶೋ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ನಲ್ಲಿ ರಣವೀರ್ ಅಲ್ಲಾಹಬಾದಿಯಾ ಅವರು ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು ಮತ್ತು ತೀವ್ರ ಟೀಕಿಗೆ ಗುರಿಯಾಗಿತ್ತು.
ಬೀರ್‌ಬೈಸೆಪ್ಸ್ ಎಂದು ಜನಪ್ರಿಯವಾಗಿರುವ ಯೂಟ್ಯೂಬರ್ ರಣವೀರ್ ಅಲ್ಲಾಹಬಾದಿಯಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.