ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇದೀಗ ಮತ್ತೊಮ್ಮೆ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಜೋಡಿ ಪೇರೆಂಟ್ಸ್ ಆದ ನಂತರ ಯಾವುದೇ ಕೆಲಸದಲ್ಲಿಯೂ ಒಟ್ಟಿಗೇ ಕಾಣಿಸಿಕೊಂಡಿಲ್ಲ. ಇದೀಗ ದೀಪ್‌ವೀರ್ ಜೋಡಿಯ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ.
ಕೆಲವು ದಿನಗಳ ಬ್ರೇಕ್ ನಂತರ ಇದೀಗ ಅವರು ಬಣ್ಣದ ಲೋಕಕ್ಕೆ ಮರಳಿದ್ದಾರೆ. ಸಿನಿಮಾ ಶೂಟಿಂಗ್ ಹಾಗೂ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಇವರು ಹಲವು ಜಾಹೀರಾತುಗಳಲ್ಲಿ ಜತೆಗೆಯಾಗಿ ನಟಿಸಿದ್ದು, ಇದೀಗ ಮತ್ತೊಮ್ಮೆ ಬ್ರ್ಯಾಂಡ್ ಒಂದರಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ.
ಈ ಜೋಡಿ ಎಮಿರೇಟ್‌ನ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಇದೇ ಜಾಹೀರಾತಿನಲ್ಲಿ ಅವರಿಬ್ಬರು ಕಾಣಿಸಿಕೊಂಡ ವಿಡಿಯೊ ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಅವರ ಪತಿ ರಣವೀರ್ ಸಿಂಗ್ ಇರುವ ಜಾಹೀರಾತು ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟದ್ದಾಗಿದೆ. ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಎಮಿರೇಟ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ ಎನ್ನುವುದನ್ನು ಜಾಹೀರಾತು ಬಿಡುಗಡೆಯೊಂದಿಗೆ ಅಧಿಕೃತವಾಗಿ ಘೋಷಿಸಲಾಗಿದೆ. ಇವರಿಬ್ಬರು ಸೇರಿ ಅಬುಧಾಬಿಯ ಪ್ರವಾಸಿ ತಾಣಗಳನ್ನು ಪರಿಚಯಿಸುತ್ತಿದ್ದಾರೆ.