ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಡಿಆರ್‌ಐ ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನ ಇದಾಗಿದೆ.
ಬಳ್ಳಾರಿ ನಗರದ ಬ್ರಾಹ್ಮಿನ್ ರಸ್ತೆಯ ಮಹೇಂದ್ರ ಕುಮಾರ್ ಜೈನ್ ಪುತ್ರ ಸಾಹಿಲ್ ಸಕಾರಿಯಾ ಜೈನ್ ಬಂಧಿತನಾಗಿದ್ದು, ವಿದೇಶದಿಂದ ಕಳ್ಳ ಸಾಗಣೆ ಮೂಲಕ ಚಿನ್ನ ಮಾರಾಟದಲ್ಲಿ ರನ್ಯಾರವರಿಗೆ ಆತ ನೆರವು ನೀಡಿದ್ದ.
ಹಲವು ವರ್ಷಗಳಿಂದ ಬಳ್ಳಾರಿ ನಗರದಲ್ಲಿ ಚಿನ್ನಾಭರಣ ಮಾರಾಟ ಮಳಿಗೆಯನ್ನು ಸಾಹಿಲ್ ಕುಟುಂಬ ನಡೆಸುತ್ತಿದೆ. ತನ್ನ ಸ್ನೇಹಿತರ ಮೂಲಕ ಆತನಿಗೆ ರನ್ಯಾ ಪರಿಚಯವಾಗಿದೆ. ಹಣದಾಸೆಗೆ ಚಿನ್ನ ಕಳ್ಳ ಸಾಗಣೆ ಕೃತ್ಯಕ್ಕೆ ಆತ ಸಹಕರಿಸಿದ್ದಾನೆ.
ಈ ಹಿನ್ನೆಲೆಯಲ್ಲಿ ಸಾಹಿಲ್‌ನನ್ನು ಬಂಧಿಸಿ ಹೆಚ್ಚಿನ ತನಿಖೆಗಾಗಿ ನಾಲ್ಕು ದಿನ ಡಿಆರ್‌ಐ ಕಸ್ಟಡಿಗೆ ಪಡೆದಿದೆ ಎಂದು ತಿಳಿದು ಬಂದಿದೆ.