ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ಪ್ರಕರಣ ತನಿಖಾ ಹಂತದಲ್ಲಿದೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ಯಾವುದೇ ಪಕ್ಷದವರಿರಲಿ, ಯಾರ ರಕ್ಷಣೆಗೆ ಯಾರೂ ಮುಂದಾಗಬಾರದು. ನಮ್ಮ ಪಕ್ಷದ ಯಾವ ಸಚಿವರು ಸಹ ಅವರಿಗೆ ಬೆಂಬಲ ನೀಡಿಲ್ಲ. ಹಾಗೇನಾದರೂ ದಾಖಲೆಗಳಿದ್ದರೆ ಬಿಜೆಪಿ ಬಿಡುಗಡೆ ಮಾಡಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಲೇಬೇಕು ಎಂದರು.
ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ ಮತ್ತು ಶಿವರಾಮ ಹೆಬ್ಬಾರರನ್ನು ಪಕ್ಷದಿಂದ ಉಚ್ಛಾಟಿಸುವ ಮಾಹಿತಿಯಿದೆ. ಈಗಾಗಲೇ ಅವರಿಬ್ಬರು ನಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಬಜೆಟ್ ಅನ್ನು ಸಹ ಸ್ವಾಗತಿಸಿದ್ದಾರೆ. ಅವರು ಯಾವಾಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ನೋಡಬೇಕಿದೆ ಎಂದರು.