ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಒಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.
ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ಒಂದು ವೇಳೆ ಜಾಮೀನು ನೀಡಿದ್ರೆ ವಿದೇಶಕ್ಕೆ ಹಾರುವ ಸಾಧ್ಯತೆಗಳಿದೆ, ಜೊತೆಗೆ ಸಾಕ್ಷ್ಯಗಳ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರನ್ಯಾ ವಿರುದ್ಧ ಕಾಫಿಪೋಸಾ ಜಾರಿ ಮಾಡಿ ಕಾಫಿಪೋಸಾ ಅಡ್ವೈಸರಿ ಬೋರ್ಡ್ ಆದೇಶ ಹೊರಡಿಸಿದೆ.