ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ನಿನ್ನೆಯಷ್ಟೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪದ ಮೇಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಪ್ರಕರಣದ ತನಿಖೆ ಮುಂದುವರೆದಂತೆ ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ನ ಫ್ಲ್ಯಾಟ್ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್ನಲ್ಲಿ ಪರಿಶೀಲನೆ ನಡೆಸಿದ್ದರು, ಬಳಿಕ ರನ್ಯಾ ಮನೆಯಲ್ಲಿ 2.06 ಕೆಜಿ ಚಿನ್ನ ಹಾಗೂ 2.67 ಕೋಟಿ ನಗದು ಹಣ ಪತ್ತೆಯಾಗಿದೆ.