ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ರಾಜ್ಯ ಸರ್ಕಾರ ಮೊದಲು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ಆ ಬಳಿಕ ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೂ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ತನಿಖೆಗೆ ವಹಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.