ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಬಂಧನದ ನಂತರ ಕಂದಾಯ ಅಧಿಕಾರಿಗಳಿಗೆ ನೀಡಿದ ತಪ್ಪೊಪ್ಪಿಗೆಯಲ್ಲಿ ದುಬೈನಿಂದ 17 ಚಿನ್ನದ ಗಟ್ಟಿಗಳನ್ನು ತಂದಿದ್ದಾಗಿ ಒಪ್ಪಿಕೊಂಡಿದ್ದಾರೆ.
ನಾನು ಯುರೋಪ್, ಅಮೆರಿಕ ಮತ್ತು ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸಿದ್ದೇನೆ ಮತ್ತು ದುಬೈ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದೇನೆ. ಈ ನಡುವೆ ನನಗೆ ವಿಶ್ರಾಂತಿ ಸಿಕ್ಕಿಲ್ಲ, ತುಂಬಾ ಸುಸ್ತಾಗಿದ್ದೇನೆ ಎಂದು ಹೇಳಿದ್ದಾರೆ.
ದುಬೈನ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಕನ್ನಡದ ನಟಿಯೊಬ್ಬರು ಸಕ್ರಿಯರಾಗಿರುವ ಬಗ್ಗೆ ಡಿಆರ್‌ಐ ಅಧಿಕಾರಿಗಳಿಗೆ ಕೆಲ ದಿನಗಳ ಹಿಂದಷ್ಟೇ ಮಾಹಿತಿ ದೊರೆತಿತ್ತು. ಪದೇ ಪದೆ ದುಬೈಗೆ ಹೋಗಿ ಬರುತ್ತಿದ್ದ ರನ್ಯಾ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು. ಕಳೆದ 15 ದಿನಗಳಲ್ಲಿ ರನ್ಯಾ ರಾವ್ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದರು. ರನ್ಯಾ ರಾವ್ ಅವರು ಕಳೆದ ವರ್ಷ 27 ಬಾರಿ ದುಬೈ ಪ್ರವಾಸ ಕೈಗೊಂಡಿದ್ದರು.