ವಿವಾಹಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

ಹೊಸದಿಗಂತ ವರದಿ, ಚಿಕ್ಕೋಡಿ:

ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ವಕೀಲ ಸಂಜು ವಡ್ಡರಗಾವಿ (37) ಎಂಬಾತನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯ ಗಂಡ ಸಾರಾಯಿ ಚಟದ ದಾಸನಾಗಿದ್ದ. ಕುಡಿತದ ಚಟ ಬಿಡಿಸಲು ಔಷಧ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ, ಮನೆಗೆ ಕರೆದುಕೊಂಡು ಹೋಗಿದ್ದ ಸಂಜು, ನೊಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.
ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!