ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅನ್ನು ಅತ್ಯಾಚಾರ ಆರೋಪದಲ್ಲಿ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಜಾನಿ ಮಾಸ್ಟರ್ (ಶೇಖ್ ಜಾನಿ ಬಾಷಾ) ವಿರುದ್ಧ ಅಸಿಸ್ಟೆಂಟ್ ಕೊರಿಯೋಗ್ರಾಫರ್ ಒಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಮೊದಲಿಗೆ ಆರೋಪ ಸುಳ್ಳೆಂದು ವಾದಿಸಿದ್ದ ಜಾನಿ ಮಾಸ್ಟರ್ ಬಳಿಕ, ಚಿತ್ರರಂಗವು ಅತ್ಯಾಚಾರ ಸಂತ್ರಸ್ತೆ ಪರ ನಿಲವು ತಳೆಯುತ್ತಿದ್ದಂತೆ ತಲೆ ಮರೆಸಿಕೊಂಡಿದ್ದರು.
ಇದೀಗ ಸೈಬರಾಬಾದ್ ಪೊಲೀಸರು ಜಾನಿ ಮಾಸ್ಟರ್ ಅನ್ನು ಗೋವಾದ ಹೋಟೆಲ್ ಒಂದರಲ್ಲಿ ಬಂಧಿಸಿದ್ದಾರೆ. ಅಲ್ಲಿಯೇ ವೈದ್ಯಕೀಯ ಪರೀಕ್ಷೆ ನಡೆಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಸೈಬರಾಬಾದ್ಗೆ ಕರೆ ತರಲಾಗುತ್ತಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅನ್ನು ಅತ್ಯಾಚಾರ ಆರೋಪದಲ್ಲಿ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ (ಶೇಖ್ ಜಾನಿ ಬಾಷಾ) ವಿರುದ್ಧ ಅಸಿಸ್ಟೆಂಟ್ ಕೊರಿಯೋಗ್ರಾಫರ್ ಒಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.