ಅತ್ಯಾಚಾರ ಆರೋಪ: ಪ್ರಜ್ವಲ್​ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಆರೋಪ ಹೊತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯ ಮೇಲಿನ ಅತ್ಯಾಚಾರದ ಹೊಸ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ವಿಡಿಯೋದಲ್ಲಿರುವ ಕೆಲವು ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದಾರೆ. ಈ ಪೈಕಿ ಓರ್ವ ಮಹಿಳೆ ಎಸ್‌ಐಟಿಗೆ ಸಾಕ್ಷ್ಯ ನೀಡಿದ್ದಾರೆ. ಈ ಹೇಳಿಕೆಯನ್ನು ಆಧರಿಸಿ, ಅಧಿಕಾರಿಗಳು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಈಗಾಗಲೇ ದಾಖಲಾಗಿರುವ ಎಫ್‌ಐಆರ್‌ಗೆ ಐಪಿಸಿ ಸೆಕ್ಷನ್ 376 ಅನ್ನು ಸೇರಿಸುವ ಮೂಲಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಹಲವು ಆಮಿಷಗಳನ್ನು ಒಡ್ಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಹೇಳಿಕೆಯನ್ನು ಸಿಆರ್​​ಪಿಸಿ 164 ಅಡಿಯಲ್ಲಿ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!