ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆಯಾದರು.
20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದರು. ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.
ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಶರತ್ತುಬದ್ಧ ಜಾಮೀನು ನೀಡಿತ್ತು. 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿತ್ತು