ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.
ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ.
ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದಾಗಿ ಆರೋಪ ಮಾಡಿದ್ದಾರೆ.