ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆಯಾಗಿದೆ.
ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಡೆಸಿದ್ದು, ಸೆ.25 ಕ್ಕೆ ಮುಂದೂಡಿದೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.