ಅತ್ಯಾಚಾರ ಆರೋಪ: ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚ್ಚಾನೆ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರತಿನಿಧಿಸಿದ್ದ ಯುವ ಸ್ಪಿನ್ನರ್ ಸಂದೀಪ್ ಲಮಿಚ್ಚಾನೆಯನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
17ರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಅಕ್ಟೋಬರ್ 6 ರಂದು ಸಂದೀಪ್ ಲಮಿಚಾನೆಯನ್ನು ನೇಪಾಳ ಪೊಲೀಸರು ಬಂಧಿಸಿದ್ದರು. ಇಂದು ಪೊಲೀಸರು ಲಮಿಚಾನೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಕರಣದ ಗಂಭೀರತೆ ಅರಿತ ನ್ಯಾಯಾಲಯ ಸಂದೀಪ್ ಲಮಿಚಾನೆಯನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಆಗಸ್ಟ್ 21 ರಂದು ಸಂದೀಪ್ ಲಮಿಚ್ಚಾನೆ 17ರ ಹರೆಯದ ಅಪ್ರಾಪ್ತೆಯನ್ನು ಕರೆದುಕೊಂಡು ನೇಪಾಳದ ಹಲವು ಭಾಗ ಸುತ್ತಾಡಿದ್ದರು. ಅಪ್ರಾಪ್ತೆ ಜೊತೆ ಕಠ್ಮಾಂಡು, ಭಕ್ತಪುರ್ ಪ್ರಯಾಣ ಮಾಡಿದ ಲಮಿಚ್ಚಾನೆ ರಾತ್ರಿ ವೇಳೆ ಕಠ್ಮಂಡುವಿಗೆ ಆಗಮಿಸಿದ್ದರು. ಇಲ್ಲಿನ ಸಿನಾಮಂಗಲ್ ಹೋಟೆಲ್‌ಗೆ ಕರೆದುಕೊಂಡು ಹೋದ ಲಮಿಚ್ಚಾನೆ ಉಳಿದುಕೊಳ್ಳಲು ರೂಮ್ ಬುಕ್ ಮಾಡಿದ್ದಾರೆ. ಅದೇ ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎಂದು ಅಪ್ರಾಪ್ತೆ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಹಲವು ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ನೇಪಾಳ ಕ್ರಿಕೆಟ್‌ ತಂಡದ ಮಾಜಿ ನಾಯಕ ಸಂದೀಪ್‌ ಲಮಿಚ್ಚಾನೆ ಗುರುವಾರ ತವರಿಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದಾರೆ. ಕಳೆದ ತಿಂಗಳು ಪ್ರಕರಣ ದಾಖಲಾದಾಗ ಅವರು ವೆಸ್ಟ್‌ಇಂಡೀಸ್‌ನಲ್ಲಿ ನಡೆಯುತ್ತಿದ್ದ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಆಡುತ್ತಿದ್ದರು. ಟೂರ್ನಿ ಮುಗಿದ ಬಳಿಕ ಅವರು ನೇಪಾಳಕ್ಕೆ ವಾಪಸಾಗಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಸಂದೀಪ್‌ ವಿಂಡೀಸ್‌ನಲ್ಲೇ ಉಳಿದ ಕಾರಣ ಅವರ ಮೇಲೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿತ್ತು. ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜ್‌ನಲ್ಲಿ ತಾವು ಕಾಠ್ಮಂಡುಗೆ ಆಗಮಿಸುತ್ತಿರುವ ವಿಮಾನದ ವಿವರಗಳನ್ನು ಹಾಕಿ, ಪೊಲೀಸರಿಗೆ ಶರಣಾಗುವುದಾಗಿ ತಿಳಿಸಿದ್ದರು. ಏರ್ ಪೋರ್ಟ್ ನಲ್ಲಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಕರೆದೊಯ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!