ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆ.
ಈ ಹಿಂದೆ ಕೊಲೆ, ಸುಲಿಗೆ, ಅಪಹರಣ ಎಸಗಿದ್ದ ಆರೋಪ ಹೊಂದಿದ್ದ ಮನು(55) ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಆರೋಪಿ ಪ್ಲಾಸ್ಟಿಕ್ ಹೆಕ್ಕುವ ಕೆಲಸ ಮಾಡುತ್ತಿದ್ದ ಮನು ಜೂನ್ 27 ರಿಂದ ನಾಪತ್ತೆಯಾಗಿದ್ದ. ಈತನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನವನ್ನು ಘೋಷಿಸಲಾಗಿತ್ತು.
ಮೊಹಮ್ಮದಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ದೇಶೀಯ ನಿರ್ಮಿತ ಪಿಸ್ತೂಲಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ಸ್ವಯಂ ರಕ್ಷಣೆಗೆ ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.