Monday, December 15, 2025

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಹತ್ಯೆಗೈದು ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ .

2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ.

ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿತ್ತು.

ಅಪರಾಧಿ ರವಿ ಅಶೋಕ್ ಘುಮಾರಿಗೆ ವಿಧಿಸಿದ್ದ ಮರಣದಂಡನೆಯನ್ನು ಸುಪ್ರೀಂಕೋರ್ಟ್ 2019ರ ಅಕ್ಟೋಬರ್ 3 ರಂದು ಎತ್ತಿ ಹಿಡಿದಿತ್ತು.

ಎರಡು ವರ್ಷದ ಮಗುವಿನ ಮೇಲೆ ಹೀನಕೃತ್ಯ ಆರೋಪಿಯ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಕ್ರೌರ್ಯದ ಭಯಾನಕ ಕಥೆ ಪ್ರದರ್ಶಿಸುತ್ತದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ (ಭಾರತದ ಈಗಿನ CJI) ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿತ್ತು.

error: Content is protected !!