ನಾಲ್ಕು ವರ್ಷದ ಬಾಲಕಿ ಅತ್ಯಾಚಾರ, ಕೊಲೆ: ರಾಷ್ಟ್ರಪತಿಯಿಂದ ಕ್ಷಮಾದಾನ ಅರ್ಜಿ ವಜಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಂದ ಪ್ರಕರಣದಲ್ಲಿ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ.

ರಾಷ್ಟ್ರಪತಿ ಭವನ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು , 2008 ರಲ್ಲಿ ಮಹಾರಾಷ್ಟ್ರದಲ್ಲಿ ಘಟನೆ ನಡೆದಿತ್ತು.ಸುಪ್ರೀಂ ಕೋರ್ಟ್ ಮೇ 3, 2017 ರಂದು ಆರೋಪಿ ವಸಂತ ಸಂಪತ್ ದುಪಾರೆ ಅವರ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು. ಆಗ 55 ವರ್ಷದವರಾಗಿದ್ದ ವಸಂತ ಸಂಪತ್ ದುಪಾರೆಗೆ ಗಲ್ಲು ಶಿಕ್ಷೆ ವಿಧಿಸಿತ್ತು.
ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ಏಪ್ರಿಲ್ 10 ರಂದು ತಿರಸ್ಕರಿಸಿದ್ದಾರೆ.

ಆಪರಾಧಿಗೆ ಗಲ್ಲುಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್‌ನ ತೀರ್ಪನ್ನು 2017 ರಲ್ಲಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ತನಗೆ ಮರಣದಂಡನೆ ವಿಧಿಸಿದ ವಿಚಾರಣಾ ನ್ಯಾಯಾಲಯದಲ್ಲಿ ತನ್ನ ವಾದವನ್ನು ಮಂಡಿಸಲು ತನಗೆ ನ್ಯಾಯಯುತವಾದ ಅವಕಾಶವನ್ನು ನೀಡಲಾಗಿಲ್ಲ ಎಂದು ಪ್ರತಿಪಾದಿಸಿದ ದುಪಾರೆ ಅವರ ಮನವಿಯನ್ನು ಪರಿಶೀಲಿಸಲು ಜುಲೈ 14, 2016 ರಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತ್ತು.
ಅಪರಾಧಿಗೆ ನೀಡಲಾದ ಮರಣದಂಡನೆಯನ್ನು ಎತ್ತಿ ಹಿಡಿಯುವಾಗ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರವು “ಕತ್ತಲೆಯಲ್ಲಿ ಆಕೆಯ ಘನತೆಯ ದೈತ್ಯಾಕಾರದ ಸಮಾಧಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!