ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕೀಲ ದೇವರಾಜೇಗೌಡ ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಿಸಿ ಹಾಸನ 2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಜೂನ್ 7ರವರೆಗೆ ಅವರನ್ನು ಮತ್ತೆ 14 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ದೇವರಾಜೇಗೌಡ ಅವರ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದು, ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೇ 11 ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್‌ಸಿ ನ್ಯಾಯಾಲಯವು ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!