ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ವೈರಲ್ ಆಗಿದ್ದ ಬೆಡಗಿ ಮೊನಾಲಿಸಾ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ರು. ಅದೇ ಸಿನಿಮಾ ನಿರ್ದೇಶಕನ ವಿರುದ್ಧ ರೇಪ್‌ಕೇಸ್ ದಾಖಲಾಗಿದ್ದು, ಇದೀಗ ದೆಹಲಿಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.
ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಿರ್ದೇಶಕ ಸನೋಜ್ ಮಿಶ್ರಾರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.
2020ರಲ್ಲಿ ಝಾನ್ಸಿ ಮೂಲದ ಯುವತಿಯನ್ನು ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ ಮೂಲಕ ಸನೋಜ್ ಮಿಶ್ರಾ ಪರಿಚಯ ಮಾಡಿಕೊಂಡಿದ್ದರು. ಬಳಿಕ ದೂರವಾಣಿ ಮೂಲಕ ಸಂಪರ್ಕದಲ್ಲಿ ಇದ್ದರು. 2021ರ ಜೂನ್ 17ರಂದು ಝಾನ್ಸಿ ರೈಲು ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡುವಂತೆ ಸನೋಜ್ ಮಿಶ್ರಾ ಕೇಳಿಕೊಂಡಿದ್ದರು. ಆದರೆ ಆ ಯುವತಿ ನಿರಾಕರಿಸಿದಾಗ, ಒಂದು ವೇಳೆ ಭೇಟಿ ಆಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸನೋಜ್ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರು ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಭಯದಿಂದ ಮರುದಿನ, ಅಂದರೆ 2021ರ ಜೂನ್ 18ರಂದು ಸನೋಜ್ ಅವರನ್ನು ಆ ಯುವತಿ ಭೇಟಿ ಮಾಡಿದ್ದರು. ಆಕೆಯನ್ನು ರೆಸಾರ್ಟ್ಗೆ ಕರೆದುಕೊಂಡು ಹೋಗಿ ಮತ್ತು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸೆಗಲಾಯಿತು. ಆಕೆಯ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿಕೊಂಡು ಸನೋಜ್ ಮಿಶ್ರಾ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.