ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ನಿರ್ದೇಶಕ ಒಮರ್ ಲಲ್ಲು ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ.
ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವಕಾಶ ನೀಡುವುದಾಗಿ ಹೇಳಿ ಟ್ರಿಪ್ ಕರೆದುಕೊಂಡು ಹೋಗಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಿರ್ದೇಶಕರು ತಮಗೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದರು. ಈ ಪ್ರಕರಣ ಈಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.