Saturday, November 1, 2025

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಲಾಗಿದೆ.

ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದೆ.

ಹೀಗಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ.

error: Content is protected !!