ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಕೋರ್ಟ್​ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2013ರ ಅತ್ಯಾಚಾರ ಪ್ರಕರಣದಲ್ಲಿ (Rape Case) ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು (Asaram Bapu) ಅನ್ನು ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

2018ರಲ್ಲಿ ಜೋಧ್‌ಪುರ ನ್ಯಾಯಾಲಯವು ನಗರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಅಸಾರಾಂ ಬಾಪುವನ್ನು ತಪ್ಪಿತಸ್ಥನೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. 77 ವರ್ಷದ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಸೇರಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಘೋಷಿಸಲಾಗಿತ್ತು.

2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ಆ ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. ಸೆಪ್ಟೆಂಬರ್ 2ರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!