ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 1 ರಂದು ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ದೂರನ್ನು ಸ್ವೀಕರಿಸಿದ ಪೊಲೀಸರು ಮೇ 10 ರಂದು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ. ಬಳಿಕ ಚಿತ್ರದುರ್ಗ ಬಳಿ ತಡರಾತ್ರಿ ಪೊಲೀಸರು ದೇವರಾಜೇಗೌಡನನ್ನು ಬಂಧಿಸಿದ್ದಾರೆ.
ಇದೀಗ ವಿಚಾರಣೆ ಬಳಿಕ ದೇವರಾಜೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಧೀಶರ ಮುಂದೆ ಹಾಜರಾಗುವ ನಿರೀಕ್ಷೆಯಿದೆ.