ಅತ್ಯಾಚಾರ ಪ್ರಕರಣ: ಇಂದು ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರ, ಆಸ್ಪತ್ರೆಗಳಲ್ಲಿ ಒಪಿಡಿ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ. ಆರ್ ಜಿ ಕರ್ ಆಸ್ಪತ್ರೆ ಬಳಿ ಪ್ರತಿಭಟನೆ ಮುಂದುವರಿದಿದೆ. ದೇಶಾದ್ಯಂತ ವೈದ್ಯರು ಸಾಮೂಹಿಕ ಪ್ರತಿಭಟನೆ ನಡೆಸುತ್ತಿದ್ದಾರೆ.

ವೈದ್ಯರು ಇಂದು ರಾಷ್ಟ್ರೀಯ ಪ್ರತಿಭಟನೆ ಮತ್ತು ಒಪಿಡಿ ಸೇವೆಗಳನ್ನು ಮುಚ್ಚುವಂತೆ ಕರೆ ನೀಡಿದ್ದಾರೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಆರೋಗ್ಯ ಸೇವೆಗಳನ್ನು 24 ಗಂಟೆಗಳ ಕಾಲ ಮುಚ್ಚಲಾಗುವುದು.

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ 24 ಗಂಟೆಗಳ ಕಾಲ ಮುಚ್ಚಿರುತ್ತದೆ. ಸರಕಾರಿ ಆಸ್ಪತ್ರೆಗಳಲ್ಲೂ ಸೇವೆ ಬಂದ್ ಆಗಲಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ತಿಳಿಸಿದ್ದಾರೆ. ತುರ್ತು ಓವರ್‌ಫ್ಲೋ ಸಂಭವಿಸಿದರೂ ನಾವು ಅದನ್ನು ನೋಡಿಕೊಳ್ಳುತ್ತೇವೆ. ಕಪ್ಪುಪಟ್ಟಿ ಧರಿಸಿ ತುರ್ತು ಚಿಕಿತ್ಸೆ ನೀಡುವುದಾಗಿ ಹೇಳಿದರು. ಹೆಚ್ಚುವರಿಯಾಗಿ, IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು ಕೂಡ ಸೇವೆ ಬಂದ್ ಮಾಡಲಿವೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!