ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ. 12ಕ್ಕೆ ಮುಂದೂಡಿಕೆಯಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆ.12 ಕ್ಕೆ ಮುಂದೂಡಿದೆ .
ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಎಸ್ ಐಟಿಯಿಂದ ಬಂಧಿಸಲ್ಪಟ್ಟಿದ್ದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸಿಪುರ ಟೌನ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ನಂತರ ಎಸ್‌ಐಟಿಗೆ ವಹಿಸಿತ್ತು.