ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ವಿಶೇಷ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿಯಾಗಿದ್ದಾರೆ ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ, ಅವರು ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ.

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನೂ ಪ್ರಕಟಿಸಿಲ್ಲ. ಆದರೆ, ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿವರೆಗಿನ ಶಿಕ್ಷೆ ನೀಡುವ ಸಾಧ್ಯತೆ ಇದೆ. ತೀರ್ಪು ಪ್ರಕಟವಾದ ಬಳಿಕ, ಕೋರ್ಟ್ ಹಾಲ್‌ನಲ್ಲೇ ಕಣ್ಣೀರೋರೆಸುತ್ತಾ ಪ್ರಜ್ವಲ್ ರೇವಣ್ಣ ಹೊರನಡೆಯುವ ದೃಶ್ಯ ಕಂಡುಬಂದಿತು.

ಈ ಮೊದಲು, ಜುಲೈ 30ರಂದು ತೀರ್ಪು ಪ್ರಕಟವಾಗಬೇಕಿತ್ತು. ಆದರೆ, ಕೆಲವು ಸಾಕ್ಷ್ಯಗಳ ಸ್ಪಷ್ಟೀಕರಣಕ್ಕಾಗಿ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದರು. ವಿಶೇಷವಾಗಿ ಗೂಗಲ್ ಮ್ಯಾಪ್ ಮೂಲಕ ನೀಡಲಾದ ಸ್ಥಳ ಮಾಹಿತಿ ಮತ್ತು ಸ್ಯಾಮ್ಸಂಗ್ ಜೆ4 ಮೊಬೈಲ್ ಫೋನ್ ಸಂಬಂಧ ದಾಖಲೆಗಳು ಪರಾಮರ್ಶೆಗೆ ಒಳಪಟ್ಟಿದ್ದವು.

ಅತ್ಯಾಚಾರ ಪ್ರಕರಣವು 2021ರ ಹೊಳೆನರಸೀಪುರ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದು, ಪ್ರಕರಣ ಬೆಳಕಿಗೆ ಬಾರದಂತೆ ಮಹಿಳೆಯನ್ನು ಅಪಹರಿಸಿ ಹಿಡಿದಿಟ್ಟ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಂಟು ಮಂದಿ ಮತ್ತಿತರ ಆರೋಪಿಗಳಿದ್ದಾರೆ. ಪ್ರಜ್ವಲ್ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ವರ್ಷದಿಂದ ಇದ್ದು ಅವರನ್ನು ಮೇ 31, 2024ರಂದು ಬಂಧಿಸಲಾಗಿತ್ತು.

ಇನ್ನೂ, ಅವರ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಈಗಾಗಲೇ ಜಾಮೀನಿನಲ್ಲಿ ಹೊರಬಂದಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶದ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾದ ಈ ತೀರ್ಪು, ಮುಂದಿನ ರಾಜಕೀಯ ಬೆಳವಣಿಗೆಗಳಿಗೂ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!