Friday, July 1, 2022

Latest Posts

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿಯ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಹುಬ್ಬಳ್ಳಿ:

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪದಡಿ ಬೆಂಡಿಗೇರಿ ಠಾಣೆ ಪೊಲೀಸರು ಗುರುವಾರ ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಂದೀಪ ದಶರಥ ಸಾಳುಂಕೆ (19) ಬಂಧಿತ ಆರೋಪಿ. ಹೊಸ ಗಬ್ಬೂರ ಬಳಿಯ ಅಪ್ರಾಪ್ತ ಯುವತಿಯೊಬ್ಬಳನ್ನು ಬುಧವಾರ ಯಾರೋ ಅಪಹರಿಸಿಕೊಂಡು ಹೋಗಿದ್ದರು. ಈ ಕುರಿತು ಯುವತಿಯ ಪಾಲಕರು ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಎಸಿಪಿ
ಪಿ.ಕೆ‌. ಪಾಟೀಲ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶ್ಯಾಮರಾಜ ಸಜ್ಜನ ನೇತೃತ್ವದಲ್ಲಿ ತಂಡ ಬಾಲಕಿಯಯನ್ನು ಪತ್ತೆ ಹಚ್ಚಿ
ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss