Tuesday, December 16, 2025

ಅತ್ಯಾಚಾರ ಆರೋಪ : ಡಿಜೆ ಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ ಸುನೀಲ್‌ ಸಸ್ಪೆಂಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಡಿಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸುನೀಲ್‌ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇನ್ಸ್‌ಪೆಕ್ಟರ್‌ ಹಾಗೂ ಎಎಸ್‌ಐ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಇನ್ಸ್‌ಪೆಕ್ಟರ್‌ ಸುನೀಲ್‌ ವಿರುದ್ಧ ಕೆಲವು ದಿನಗಳ ಹಿಂದೆ ಮುಸ್ಲಿಂ ಮಹಿಳೆಯೊಬ್ಬರು ಡಿಜಿ ಕಚೇರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಇನ್ಸ್‌ಪೆಕ್ಟರ್ ಸುನೀಲ್ ಹಾಗೂ ಎಎಸ್‌ಐನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

error: Content is protected !!