ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿ ವಿರುದ್ಧ ದಾಖಲಾಗಿದ್ದ ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಪಡಿಸಿ ಆದೇಶ ಹೊರಡಿಸಿದೆ.
2014ರಲ್ಲಿ ಗಾಯಕಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಆ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಸ್ವಾಮೀಜಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.
ಇದೀಗ ಕೇಸ್ ರದ್ದುಪಡಿಸಿ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.