ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಹೊಸದಿಗಂತ ವರದಿ, ನಾಗಮಂಗಲ :

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಇಲ್ಲಿನ ಅಪರ ಸತ್ರ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ಳೂರಿನ ಆದಿಚುಂಚನಗಿರಿ ವಸತಿಗೃಹದಲ್ಲಿ ವಾಸವಾಗಿದ್ದ ಅಶೋಕ್ ಎಂಬಾತನೇ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.
ಆರೋಪಿ ಅಶೋಕ್ 2020ರ ಜುಲೈ 3ರಂದು ರಾತ್ರಿ 10 ಗಂಟೆ ಸಮಯದಲ್ಲಿ ಆದಿಚುಂಚನಗಿರಿ ವಸತಿಗೃಹದಲ್ಲಿ ವಾಸವಾಗಿದ್ದ ಅಪ್ಪ-ಅಮ್ಮ ಇಲ್ಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಆತನ ವಿರುದ್ಧ ಬೆಳ್ಳೂರು ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ಅಶೋಕ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಪ್ರಧಾನ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ಅಶೋಕ್‌ನ ಮೇಲೆ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!