ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೋಷಕರು ಆರೋಪಿಯ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಪೊಲೀಸರ ಉಪಸ್ಥಿತಿಯ ಹೊರತಾಗಿಯೂ, ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ. ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗಬಹುದು ಎಂದು ಯೋಚಿಸಿದ ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಉದ್ವಿಗ್ನತೆಯನ್ನು ನಿಯಂತ್ರಣಗೊಳಿಸಿ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದು, ನ್ಯಾಯ ದೊರಕಿಸಿಕೊಡಿ ಎಂದು ಪಟ್ಟು ಹಿಡಿದಿದ್ದಾರೆ.