ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವತಿಯೋರ್ವಳನ್ನು ಚಲಿಸುತ್ತಿರುವ ಬಸ್‌ನಲ್ಲಿಯೇ ಅತ್ಯಾಚಾರಕ್ಕೀಡುಮಾಡಲಾದ ಆಘಾತಕಾರಿ ಘಟನೆ ಕಾನ್ಪುರದಿಂದ ಜೈಪುರಕ್ಕೆ ತೆರಳುವ ಹಾದಿಯಲ್ಲಿ ನಡೆದಿದ್ದು, ಈ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ.
ಡಿಸೆಂಬರ್ 9ರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಖಾಸಗಿ ಬಸ್ ಉತ್ತರ ಪ್ರದೇಶದಿಂದ ಜೈಪುರಕ್ಕೆ ತೆರಳುತ್ತಿತ್ತು. ಕಾನ್ಪುರದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದ ಸಂತ್ರಸ್ತೆ ಬಸ್‌ನ ಕ್ಯಾಬಿನ್‌ನಲ್ಲಿ ಕುಳಿತಿದ್ದರು. ಕ್ಯಾಬಿನ್‌ನೊಳಗೆ ಆರಿಫ್ ಮತ್ತು ಲಲಿತ್ ಎಂಬ ಆರೋಪಿಗಳಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಬ್ಬರು ಚಾಲಕರಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಆರಿಫ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಆರೋಪಿ ಲಲಿತ್‌ಗಾಗಿ ಶೋಧ ತೀವ್ರಗೊಂಡಿದೆ ಎಂದು ಕನೋಟಾ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ