ಡ್ರಾಪ್‌ ಕೊಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡ್ರಾಪ್ ನೀಡುವ ನೆಪದಲ್ಲಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಎಸ್ ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದೆ.

ಭಾನುವಾರ ಮುಂಜಾನೆ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ವ್ಯಾಪ್ತಿಯ ಹೊಸೂರು ಸರ್ವಿಸ್ ರಸ್ತೆಯ ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಹೆಬ್ಬಗೋಡಿ ನಿವಾಸಿಯಾಗಿರುವ ಸಂತ್ರಸ್ತೆ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣವನ್ನು ಭೇದಿಸಲು ಐದು ತಂಡಗಳನ್ನು ರಚಿಸಲಾಗಿತ್ತು. ಐದು ವಿಶೇಷ ತಂಡಗಳು ಸಂತ್ರಸ್ತೆಯ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿವೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವ ಪೊಲೀಸರು, ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಸ್ನೇಹಿತನೊಂದಿಗೆ ಕೋರಮಂಗಲದ ಪಬ್‍ವೊಂದಕ್ಕೆ ಬಂದಿದ್ದಳು. ವಾಪಸ್ ಹೋಗುವಾಗ ಸ್ನೇಹಿತನ ಕಾರಿನಲ್ಲಿ ತೆರಳಿದ್ದಾಳೆ, ಈ ವೇಳೆ ಕಾರು ಅಪಘಾತವಾಗಿ, ಆಟೋ ಚಾಲಕರೊಂದಿಗೆ ವಾಗ್ವಾದ ನಡೆದಿದೆ. ಗಸ್ತಿನಲ್ಲಿದ್ದ ಹೊಯ್ಸ ಪೊಲೀಸ್ ಸ್ಥಳಕ್ಕೆ ಧಾವಿಸಿದಾಗ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದಾರೆ. ಯುವತಿ ಒಂಟಿಯಾಗಿ ಸ್ಥಳದಿಂದ ನಡೆದುಕೊಂಡೇ ತೆರಳಿದ್ದಳು. ಈ ವೇಳೆ ಮೋಟಾರ್ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಬಿಡುವುದಾಗಿ ಹೇಳಿ ಗಾಡಿ ಹತ್ತಿಸಿಕೊಂಡಿದ್ದಾನೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!