ಹೊಸದಿಗಂತ ಡಿಜಿಟಲ್ ಡೆಸ್ಕ್:
8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಾಳಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಜಯಸಿಂಗ್, ಮುಖೇಶ್ ಸಿಂಗ್ ಹಾಗೂ ಮನೀಶ್ ತಿರ್ಕಿ ಎಂಬ ಅಪರಾಧಿಗಳಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.
2021, ನವೆಂಬರ್ 21ರಂದು ರಾಜ್ ಟೈಲ್ಸ್ ಫ್ಯಾಕ್ಟರಿಯೊಂದರಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು.
ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಬಿಹಾರ, ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದರು.
ಆರೋಪಿಗಳು ಬಾಲಕಿಯನ್ನು ಹೊತ್ತೊಯ್ದು ಫ್ಯಾಕ್ಟರಿಯಲ್ಲಿ ಗ್ಯಾಂಗ್ ರೇಪ್ ಮಾಡಿ, ಬಳಿಕ ಕೊಲೆಗೈದು ಪರಾರಿಯಾಗಿದ್ದರು. ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.