ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 30 ವರ್ಷ ಜೈಲು ಶಿಕ್ಷೆ

ಹೊಸದಿಗಂತ ವರದಿ,ಕಲಬುರಗಿ:

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವ್ಯಸಗಿದ ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಕಲಬುರಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ತೀರ್ಪು ನೀಡಿದೆ.

ಪ್ರಕರಣದ ಆರೋಪಿ ಪೀರಪ್ಪ ಕಡಗಂಚಿಗೆ ಪೋಕ್ಸೋ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.
2020 ಜೂನ್ 17 ರಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದಿದ್ದಾಗ, ಕಾಮುಕ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು.

ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ತನಿಖಾಧಿಕಾರಿ ಸಂಗಮೇಶ ಪಾಟೀಲ್ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!