ಹೊಸ ದಿಗಂತ ವರದಿ, ಮಂಡ್ಯ :
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಮೂವರು ಕಾಮುಕರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ‌್ಯಕರ್ತರು ಅಪರ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದ ಬಿಜೆಪಿ ಕಾರ‌್ಯಕರ್ತರು ಅಪರ ಪೊಲೀಸ್ ಅಧೀಕ್ಷಕ ಎಸ್.ಇ. ಗಂಗಾಧರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ನಗರದ ಕೆರೆ ಅಂಗಳದ ಸರ್ಕಾರಿ ಶಾಲಾ ಆವರಣದಲ್ಲಿ ಜ.31 ರಂದು ಎಂಟು ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೆಲಸವಾಗಿದೆ. ಬಾಲಕಿಗೆ ಕೇಕ್ ಕೊಡಿಸಿ, ಚಾಕುವಿನಿಂದ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.
ಬಾಲಕಿಯು ಮನೆಯಲ್ಲಿ ವಿಷಯ ಹೇಳದೇ ಮುಚ್ಚಿಟ್ಟಿದ್ದಾರೆ ಎನ್ನಲಾಗಿದ್ದು, ಅತ್ಯಾಚಾರ ನಡೆದ ಎರಡ ದಿನ ಕಳೆದ ಮೇಲೆ ಆ ಬಾಲಕಿಗೆ ಹೊಟ್ಟೆ ನೋವು, ರಕ್ತಸ್ರಾವ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಚಿಕ್ಕಮ್ಮ ಬಂದು ವಿಚಾರಿಸಿದಾಗ ದುಷ್ಕೃತ್ಯದ ಬಗ್ಗೆ ಬಾಲಕಿ ಹೇಳಿದ್ದಾರೆ, ನಂತರ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಲ್ಲಿ ಪ್ರಭಾವಿ ರಾಜಕಾಣಿಗಳು ವಿಷಯ ಮುಚ್ಚಿಡಲು ಪ್ರಯತ್ನಿಸುತ್ತಿದ್ದು ಇದಕ್ಕೆ ಅವಕಾಶ ನೀಡದೇ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.