ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಉತ್ತರ ಪ್ರದೇಶದ ಸೋನಭದ್ರ ಶಾಸಕ ರಾಮದುಲರ್ ಗೊಂಡ್‌ ಗೆ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಇದರ ಬೆನ್ನಲ್ಲೇ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದ ಶಾಸಕರನ್ನುಅಂತಹ ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಲಾಗುತ್ತದೆ. ನಂತರ ಇನ್ನೂ ಆರು ವರ್ಷಗಳವರೆಗೆ ಅನರ್ಹರಾಗಿರುತ್ತಾರೆ.

ಸೋನಭದ್ರದಲ್ಲಿರುವ ಎಂಪಿ-ಎಂಎಲ್‌ಎ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಹ್ಸಾನ್ ಉಲ್ಲಾ ಖಾನ್ ಅವರು ಶಾಸಕನಿಗೆ 10 ಲಕ್ಷ ರೂಪಾಯಿ ದಂಡವನ್ನು ವಿಧಿಸಿದ್ದಾರೆ.

ಡಿಸೆಂಬರ್ 12 ರಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತ್ಯಪ್ರಕಾಶ್ ತ್ರಿಪಾಠಿ ಅವರು, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ದುಡ್ಡಿ ವಿಧಾನಸಭಾ ಕ್ಷೇತ್ರದ ಶಾಸಕರನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಘಟನೆಯು 2014 ರಲ್ಲಿ ನಡೆದಿದ್ದು, ಗೊಂಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ವಿಚಾರಣೆಯು POCSO ನ್ಯಾಯಾಲಯದಲ್ಲಿ ಪ್ರಾರಂಭವಾಯಿತು. ಆದರೆ ನಂತರ ಗೊಂಡ್ ಶಾಸಕರಾಗಿ ಆಯ್ಕೆಯಾದಾಗ MP-MLA ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.ಶುಕ್ರವಾರ ತೀರ್ಪು ಹೊರಬೀಳುವ ಮುನ್ನವೇ ಶಾಸಕರ ಪರ ವಕೀಲರು ಕನಿಷ್ಠ ಶಿಕ್ಷೆಗೆ ಒತ್ತಾಯಿಸಿದರು. ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಗೊಂಡರು ನೋಡಿಕೊಳ್ಳುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಜಿಲ್ಲಾ ಕಾರಾಗೃಹದಲ್ಲಿರುವ ಶಾಸಕರನ್ನು ನ್ಯಾಯಾಲಯಕ್ಕೆ ಕರೆತಂದು ತೀರ್ಪು ಪ್ರಕಟವಾದ ಬಳಿಕ ಮತ್ತೆ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!