ವೃದ್ಧೆಯ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ವರದಿ, ವಿಜಯಪುರ:

ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ.

ಇಲ್ಲಿನ ಝಂಡಾಕಟ್ಟಿ ನಿವಾಸಿ ಸದ್ದಾಂ ಶೇಖ ಹಾಗೂ ಬಸವನಗರದ ರವಿ ಬಂಧಿತ ಆರೋಪಿಗಳು.

ಈ ಆರೋಪಿಗಳು ಕಳೆದ ಫೆ.23 ರಂದು ಇಲ್ಲಿನ ವಾಟರ್ ಟ್ಯಾಂಕ್ ಬಳಿ ರಾತ್ರಿ ಮನೆಗೆ ಹೋಗಬೇಕು ಎಂದು ನಿಂತಿದ್ದ 60 ವರ್ಷದ ವೃದ್ಧೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಕುರಿತು ತನಿಖೆ ನಡೆಸಿ, ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!