September 2, 2026
Wednesday, September 2, 2026
spot_img

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ಪ್ರೌಢಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಚಳ್ಳಕೆರೆ ತಾಲ್ಲೂಕು ತಳಕು ಠಾಣೆ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಸ್‌ ದಾಖಲಾಗಿದ್ದು ತಿಳಿಯುತ್ತಿದ್ದಂತೆಯೇ ಶಿಕ್ಷಕ ರಾಜಣ್ಣ ಪರಾರಿಯಾಗಿದ್ದಾನೆ. ಆತ ವಿಷಯ ತಿಳಿದ ನಂತರ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾನೆ. ಚಳ್ಳಕೆರೆಯ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದಲೇ ಆತ ಪರಾರಿಯಾಗಿದ್ದಾನೆ.

ವಿದ್ಯಾರ್ಥಿನಿಯೊಂದಿಗೆ ಸಲುಗೆ ಹೊಂದಿದ್ದ ರಾಜಣ್ಣ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ. ವಿದ್ಯಾರ್ಥಿನಿ ಗರ್ಭಿಣಿಯಾದ ನಂತರ ಚಳ್ಳಕೆರೆ ನಗರದ ಶ್ರೀಲಕ್ಷ್ಮಿ ಶ್ರೀನಿವಾಸ ನರ್ಸಿಂಗ್ ಹೋಂನ ವೈದ್ಯೆ ಶಂಕರಲಕ್ಷ್ಮಿ ಅವರನ್ನು ಸಂಪರ್ಕಿಸಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !