ಹೊಸದಿಗಂತ ಹಾಸನ:
ಜನ್ಮ ನೀಡಿದ ತಂದೆಯೇ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಸಕಲೇಶಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಹತ್ತು ವರ್ಷದ ಬಾಲಕಿ ತನ್ನ ಮೇಲೆ ತಂದೆಯೇ ನಡೆಸಿರುವ ಪೈಶಾಚಿಕ ಕೃತ್ಯವನ್ನು ಅಣ್ಣನ ಬಳಿ ಹೇಳಿಕೊಂಡಿದ್ದು, ಈ ಮೂಲಕ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.