ಪ್ರಿಯಕರನ ಎದುರಲ್ಲೇ ಯುವತಿ ಮೇಲೆ ಅತ್ಯಾಚಾರ: ಐವರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಆಕೆಯ ಪ್ರಿಯಕರನ ಎದುರಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ.

ಗುರುವಾರ ಸಂಜೆ ಇವರಿಬ್ಬರೂ ಹೋಗುತ್ತಿದ್ದಾಗ, ದುರ್ಗಮ ಪ್ರದೇಶವೊಂದರಲ್ಲಿ ದುರುಳರ ಗ್ಯಾಂಗ್​ ಇವರನ್ನು ಅಡ್ಡಗಟ್ಟಿದೆ. ಇವರಿಬ್ಬರಿಗೂ ಚಾಕು ತೋರಿಸಿ, ಅತ್ಯಾಚಾರ ಎಸಗಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರ ಮಾಡಿದವರೆಲ್ಲ ಮಾಸ್ಕ್​ ಧರಿಸಿದ್ದರು. ಕುಡಿದಿದ್ದರು. ಅವರ ಮೇಲೆ ಹಲ್ಲೆ ನಡೆಸಿದರು. ನಂತರ ಇನ್ನೂ ನಾಲ್ವರು ಬಂದು ಸೇರಿಕೊಂಡು, ಒಟ್ಟು ಆರು ಮಂದಿ ಸೇರಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಸದ್ಯ ಐವರನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!