Monday, December 4, 2023

Latest Posts

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ : 46 ವರ್ಷದವನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
9 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯೊಬ್ಬನನ್ನು ಸ್ಯೂ ಸೀಲಂಪುರ್‌ ಪ್ರದೇಶದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮೊಹಮ್ಮದ್ ಶಾಜಿದ್ ಎಂದು ಗುರುತಿಸಲಾಗಿದ್ದು ಆತ ಬಿಹಾರದ ಬೇಗುಸರಾಯ್ ನ ನರ್ವಾಡ ಗ್ರಾಮದವನು ಎನ್ನಲಾಗಿದೆ.

ಸಂತ್ರಸ್ತ ಬಾಲಕಿಯು ಚಿಕ್ಕಂದಿನಿಂದಲೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಬಾಲಕಿಗೆ ಪರಿಚಿತನಾಗಿರುವ ಆಪಾದಿತ ವ್ಯಕ್ತಿಯು ಬಾಲಕಿ ಬೀದಿಯಲ್ಲಿ ಆಟವಾಡುತ್ತಿದ್ದಾಗ ಆಕೆಗೆ ಆಮಿಷವೊಡ್ಡಿ ಪಕ್ಕದಲ್ಲಿರುವ ಕಾರ್ಖಾನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ. ಆತನ ಮೇಲೆ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!