ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಭೋಪಾಲ್ನ ಬಿಎಂಎಚ್ಆರ್ಸಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿ ಮೇಲೆ ಅತ್ಯಾಚಾರವಾಗಿದೆ.
ಆಸ್ಪತ್ರೆಯ ಪುರುಷ ನರ್ಸ್ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಈ ಪ್ರಕರಣ ಏಪ್ರಿಲ್ 6 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಆಸ್ಪತ್ರೆ ವಿಷಯವನ್ನು ಮುಚ್ಚಿ ಹಾಕಲು ಯತ್ನಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ ವಿಷಯ ಹೊರಗೆ ಬಂದಿದೆ. ನಂತರ ಆರೋಪಿ ಸಂತೋಷ್ ಅಹಿರ್ವಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಸ್ಟಾಫ್ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಕೂಡ ಸಂತೋಷ್ ಮೇಲಿದೆ.