Thursday, August 18, 2022

Latest Posts

ನಿಲ್ಲದ ಅತ್ಯಾಚಾರ ಪ್ರಕರಣ: ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಸುತ್ತಿಗೆಯಿಂದ ತಲೆಗೆ ಹೊಡೆದ ಕ್ರೂರಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ15 ವರ್ಷದ ಬಾಲಕಿ ಮೇಲೆ ಕಿಡಿಗೇಡಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.
ಉಲ್ಲಾಸ್‌ನಗರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆಯ ತಲೆಗೆ ಸುತ್ತಿಗೆಯಲ್ಲಿ ಹೊಡೆದು ಪರಾರಿಯಾಗಿದ್ದಾನೆ.
ವಿಷಯ ತಿಳಿದ ಕೂಡಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಶ್ರೀಕಾಂತ ಗಾಯಕ್ವಾಡ ಎಂಬಾತನನ್ನು ಬಂಧಿಸಿದ್ದಾರೆ.
ಶಿರ್ಡಿಯಿಂದ ಬಾಲಕಿ ಉಲ್ಲಾಸ್‌ನಗರಕ್ಕೆ ರೈಲಿನಲ್ಲಿ ಬಂದಿದ್ದಳು. ಸ್ಕೈವಾಕ್‌ನಲ್ಲಿ ಇಬ್ಬರು ಸ್ನೇಹಿತೆಯರ ಜೊತೆ ನಡೆದುಕೊಂಡು ಹೋಗುತ್ತಿದ್ದಳು. ತಲೆಗೆ ಬಾಲಕಿ ಬಟ್ಟೆ ಕಟ್ಟಿದ್ದಳು. ಆ ಬಟ್ಟೆಯನ್ನು ಆರೋಪಿ ತೆಗೆದು ಆಕೆಯ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಸ್ನೇಹಿತೆಯರನ್ನು ಬೆದರಿಸಿ ಕಳಿಸಿದ್ದಾನೆ.
ತದನಂತರ ರೈಲ್ವೆ ನಿಲ್ದಾಣದ ಬಳಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪರಾರಿಯಾಗಲು ಯತ್ನಿಸಿದ್ದು, ಆಕೆಗೆ ಮನಬಂದಂತೆ ಥಳಿಸಿದ್ದಾನೆ. ಆದರೂ ಬಾಲಕಿ ಆತನಿಂದ ತಪ್ಪಿಸಿಕೊಂಡಿದ್ದಾಳೆ. ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿಚಾರಣೆ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!