ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಹೊಸದಿಗಂತ ವರದಿ,ಸುಂಟಿಕೊಪ್ಪ;

ಅಪ್ರಾಪ್ರ ವಯಸ್ಸಿನ ಬಾಲಕಿ ಮೇಲೆ ಆತ್ಯಾಚಾರ ಎಸಗಿದ ಆರೋಪದಡಿ ಓರ್ವನನ್ನು ಬಂಧಿಸಿರುವ ಸುಂಟಿಕೊಪ್ಪ ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲೊಸಿದ್ದಾರೆ.
ಇಲ್ಲಿನ ಮಧುರಮ್ಮ ಬಡಾವಣೆಯ ನಿವಾಸಿ ನಾಸಿರ್ (40) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಬುಧವಾರ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಆತ್ಯಾಚಾರ ಎಸಗಿರುವ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಶಾಲನಗರ ಡಿವೈಎಸ್‍ಪಿ ಶೈಲೇಂದ್ರ ಅವರ ಮಾರ್ಗದರ್ಶನದಡಿ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಮಹೇಶ್, ಸುಂಟಿಕೊಪ್ಪ ಠಾಣಾಧಿಕಾರಿ ಹೆಚ್.ಡಿ. ಮಂಜು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!