spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಶಿವಮೊಗ್ಗ :

ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಎ.ಡಿ.ಜೆ ಎಫ್.ಟಿ.ಎಸ್.ಸಿ 1 (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಶಿವಮೊಗ್ಗ ಟಿಪ್ಪುನಗರ ವಾಸಿಯಾದ ಬರ್ಕತ್ ಯಾನೆ ಮೊಹಮ್ಮದ್ ಗೌಸ್ ಫೀರ್ ಶಿಕ್ಷೆಗೆ ಗುರಿಯಾಗಿದ್ದು, ಈತ ತನ್ನ ಸಂಬಂಧಿ ಒಂಭತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ 11-05-2019 ರಂದು ಅತ್ಯಾಚಾರ ನಡೆಸಿದ್ದ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಬಿ.ಕೆ. ಲತಾ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಸಂಬಂಧ ಫೋಕ್ಸೋ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದರಿಂದ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ಮುಂದುವರೆಸಲು ನ್ಯಾಯಾಧೀಶರಾದ ದಯಾನಂದ ಆದೇಶಿಸಿದ್ದಾರೆ.
ನೊಂದ ಬಾಲಕಿಗೆ ಪರಿಹಾರವನ್ನಾಗಿ ದಂಡದ ಮೊತ್ತದಲ್ಲಿ 48 ಸಾವಿರ ರೂ. ಹಾಗೂ ಉಳಿದ 2000 ರೂ. ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸತೀಶ್‍ ವಾದ ಮಂಡಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss